ADVERTISEMENT

ಭೂಸುಧಾರಣೆ ಸುಗ್ರೀವಾಜ್ಞೆ ಇಳಿಕೆಯಾಗದ ಭೂಮಿತಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 19:35 IST
Last Updated 3 ನವೆಂಬರ್ 2020, 19:35 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಕರ್ನಾಟಕ ಭೂಸುಧಾರಣೆ (ಎರಡನೇ ತಿದ್ದುಪಡಿ) ಸುಗ್ರೀವಾಜ್ಞೆ 2020ಕ್ಕೆ ರಾಜ್ಯಪಾಲರು ಅಂಕಿತ ನೀಡಿದ್ದಾರೆ.

ಕರ್ನಾಟಕ ಭೂಸುಧಾರಣಾ ಕಾಯ್ದೆ 1961ರ ಕಲಂ 63ರ ಅಡಿ ಕೃಷಿಭೂಮಿ ಹೊಂದುವ ಗರಿಷ್ಠ ಮಿತಿಯನ್ನು 108 ಎಕರೆಗೆ ಇಳಿಸು
ವುದಾಗಿ ಕಂದಾಯ ಸಚಿವ ಆರ್‌.ಅಶೋಕ ಅವರು ವಿಧಾನಸಭೆಯಲ್ಲಿ ಭರವಸೆ ನೀಡಿದ್ದರು. ಆದರೆ, ಅದರ ಪ್ರಸ್ತಾಪ ಸುಗ್ರೀವಾಜ್ಞೆಯಲ್ಲಿ ಇಲ್ಲ.

ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಈ ತಿದ್ದುಪಡಿ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದ್ದರೂ ವಿಧಾನಪರಿಷತ್ತಿನಲ್ಲಿ ಮಂಡನೆಯಾಗದ ಕಾರಣ, ಮಸೂದೆ ಅನೂರ್ಜಿತಗೊಂಡಿತು.

ADVERTISEMENT

ಅಧಿವೇಶನದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಮತ್ತೊಮ್ಮೆ ಒಪ್ಪಿಗೆ ನೀಡಿ, ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈ ಕಾಯ್ದೆಯಡಿ ನೀರಾವರಿ ಪ್ರದೇಶದ ಜಮೀನುಹೊರತುಪಡಿಸಿ, ಇತರ ಕೃಷಿಭೂಮಿಯನ್ನು ಕೃಷಿಕರಲ್ಲದವರಿಗೂ ಖರೀದಿಸಲು ಅವಕಾಶನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.