ADVERTISEMENT

ಕೊಡಗು ಜಿಲ್ಲೆಯಲ್ಲಿ ಭೂ ಕಂಪನ ಆಗಲಿದೆಯೆಂಬ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ: ಡಿಸಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2018, 12:00 IST
Last Updated 18 ಆಗಸ್ಟ್ 2018, 12:00 IST
ಸೋಮವಾರಪೇಟೆ ಸಮೀಪದ ಶಿರಂಗಳ್ಳೀ ಗ್ರಾಮದಲ್ಲಿ ಗುಡ್ಡ ಕುಸಿದು ಮುಖ್ಯ ರಸ್ತೆಯೊಂದಿಗೆ ನೂರಾರು ಏಕರೆ ಕೃಷಿ ಭೂಮಿ ನಷ್ಟವಾಗಿರುವುದು.
ಸೋಮವಾರಪೇಟೆ ಸಮೀಪದ ಶಿರಂಗಳ್ಳೀ ಗ್ರಾಮದಲ್ಲಿ ಗುಡ್ಡ ಕುಸಿದು ಮುಖ್ಯ ರಸ್ತೆಯೊಂದಿಗೆ ನೂರಾರು ಏಕರೆ ಕೃಷಿ ಭೂಮಿ ನಷ್ಟವಾಗಿರುವುದು.   

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಭೂ ಕಂಪನವಾಗಲಿದೆ ಎಂಬ ಸುದ್ದಿ ಸಾರ್ವಜನಿಕ ಮತ್ತು ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

‘ಕೊಡಗು ಜಿಲ್ಲೆಯಲ್ಲಿ ಭೂ ಕಂಪನವಾಗಲಿದೆ ಎಂಬ ಸುದ್ದಿ ಸಾರ್ವಜನಿಕ ಮತ್ತು ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿರುವುದಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ವಿನಂತಿ’ ಎಂದು ಶ್ರೀವಿದ್ಯಾ ಅವರು ಕೋರಿದ್ದಾರೆ.

ಕೊಡಗಿನಲ್ಲಿ ನಿರಂತರ ಮಳೆ ಹಾಗೂ ಭೂಕುಸಿತದಿಂತದಿಂದ ಉಂಟಾಗಿರುವ ಅತಿವೃಷ್ಟಿ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ವೈಮಾನಿಕ ಸಮೀಕ್ಷೆ ಮೂಲಕ ಅವಲೋಕಿಸಿದರು.

ADVERTISEMENT

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.