ಗದಗ: ‘ರಾಜ್ಯದಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಕುರಿತು ಚರ್ಚೆ ನಡೆಯುತ್ತಿದೆ. ಆದರೆ, ಈವರೆಗೆ ತೀರ್ಮಾನ ಕೈಗೊಂಡಿಲ್ಲ. ಇದರಲ್ಲಿ ಮುಖ್ಯಮಂತ್ರಿಯವರ ನಿರ್ಣಯವೇ ಅಂತಿಮ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಒಪ್ಪುವುದಿಲ್ಲ. ಪ್ರತ್ಯೇಕ, ರಾಜ್ಯ ಶಿಕ್ಷಣ ನೀತಿಯನ್ನು (ಎಸ್ಇಪಿ) ಪ್ರೋತ್ಸಾಹಿಸುತ್ತದೆ. ಹಾಗಾಗಿ ಎಸ್ಇಪಿ ಸಮಿತಿಯಲ್ಲಿ ದ್ವಿಭಾಷಾ, ತ್ರಿಭಾಷಾ ಸೂತ್ರದ ಬಗ್ಗೆ ಚರ್ಚಿಸಲಾಗುವುದು’ ಎಂದು ಶುಕ್ರವಾರ ಅವರು ಸುದ್ದಿಗಾರರಿಗೆ ತಿಳಿಸಿದರು.
‘ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಮಹಿಳಾ ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಪತಿ ಅಥವಾ ತಂದೆಯ ಆದಾಯ ಪ್ರಮಾಣಪತ್ರ ಲಗತ್ತಿಸಬೇಕಾ ಎಂಬ ಪ್ರಕರಣ ಇದಾಗಿದೆ. ಕೋರ್ಟ್ ಆದೇಶವನ್ನು ಇಲಾಖೆ ಪಾಲಿಸಲಿದೆ’ ಎಂದರು.
‘ಮುಂದೆ ಈ ರೀತಿಯ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ಹೊಸ ಶಿಕ್ಷಕರ ನೇಮಕಾತಿ ಸಂಬಂಧ ಕಾನೂನು ಇಲಾಖೆ ಅಭಿಪ್ರಾಯ ಕೇಳಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.