ADVERTISEMENT

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉತ್ತೀರ್ಣರಾದ ಎಲ್ಲರಿಗೆ ಲ್ಯಾಪ್‌ಟಾಪ್‌?

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 3:48 IST
Last Updated 30 ಜನವರಿ 2020, 3:48 IST
   

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿಉತ್ತೀರ್ಣರಾದ ಪದವಿ ತರಗತಿಗಳ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

‘ಪ್ರಥಮ ಪದವಿ ತರಗತಿಗಳ 1 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳಿಗೆ ಸಹ ಶೀಘ್ರ ಲ್ಯಾಪ್‌ಟಾಪ್‌ ನೀಡಲಾಗುವುದು. ಎರಡು ಮತ್ತು ಮೂರನೇ ವರ್ಷಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಹ ಲ್ಯಾಪ್‌ಟಾಪ್‌ ನೀಡುವ ಕುರಿತು ಇದೀಗ ಪರಿಶೀಲನೆ ನಡೆಯುತ್ತಿದೆ, ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು, ಈಗಾಗಲೇ ನೀಡಿದ ಲ್ಯಾಪ್‌ಟಾಪ್‌ ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ವೈದ್ಯಕೀಯ ಸೀಟು ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಶಿಫಾರಸು ಮಾಡಲು ನ್ಯಾಯಮೂರ್ತಿ
ಯೊಬ್ಬರನ್ನು ನೇಮಕ ಮಾಡುವ ನಿಟ್ಟಿನಲ್ಲಿ ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರಿಗೆ ಈಗಾಗಲೇ 4 ಬಾರಿ ಪತ್ರ ಬರೆಯಲಾಗಿದೆ ಎಂದರು.

ADVERTISEMENT

ದುಡ್ಡು ಠೇವಣಿಗೆ ಟೆಂಡರ್‌: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಬಳಿ₹ 300 ಕೋಟಿ ಸಂಗ್ರಹ ಠೇವಣಿ ಇದ್ದು, ಈ ವರ್ಷದಿಂದ ಟೆಂಡರ್‌ ಕರೆದು ಅದನ್ನು ಬ್ಯಾಂಕ್‌ನಲ್ಲಿ ಇರಿಸಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.