ADVERTISEMENT

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ: ಹರಿದು ಬರುತ್ತಿದೆ ಬೃಹತ್ ಜನಸ್ತೋಮ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 6:42 IST
Last Updated 10 ಸೆಪ್ಟೆಂಬರ್ 2022, 6:42 IST
   

ದೊಡ್ಡಬಳ್ಳಾಪುರ: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಪ್ರಯುಕ್ತ ಬಿಜೆಪಿ ರಾಜ್ಯ ಘಟಕದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಶನಿವಾರ ಆಯೋಜಿಸಿರುವ ಜನಸ್ಪಂದನ ಸಮಾವೇಶಕ್ಕೆ ಜನರು ಅಪಾರ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಪಟ್ಟಣದ ಹೊರ ವಲಯದ ಎಲ್ ಆ್ಯಂಡ್ ಟಿ ಕಾರ್ಖಾನೆ ಸಮೀಪದಲ್ಲಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ಸಮಾವೇಶ ನಡೆಯುತ್ತಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ಸಚಿವರಾದ ಡಾ.ಕೆ. ಸುಧಾಕರ್, ಮುನಿರತ್ನ, ಎಂ.ಟಿ.ಬಿ. ನಾಗರಾಜ್ ನೇತೃತ್ವದಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ‌. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಸಮಾವೇಶಕ್ಕೆ ಬರುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.