ADVERTISEMENT

ಎನ್‌ಇಪಿ ವಿರೋಧಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ: ಪರಿಷತ್‌ನಲ್ಲಿ ಖಂಡನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 17:45 IST
Last Updated 15 ಸೆಪ್ಟೆಂಬರ್ 2021, 17:45 IST
ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನ ಕಾರ್ಯಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ಸದಸ್ಯರನ್ನು ಪೊಲೀಸ್‌ ಸಿಬ್ಬಂದಿ ವಶಕ್ಕೆ ಪಡೆದರು–ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌
ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನ ಕಾರ್ಯಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ಸದಸ್ಯರನ್ನು ಪೊಲೀಸ್‌ ಸಿಬ್ಬಂದಿ ವಶಕ್ಕೆ ಪಡೆದರು–ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌   

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ ಸದಸ್ಯರು ಖಂಡಿಸಿದರು.

ಗಮನ ಸೆಳೆಯುವ ಸೂಚನೆ ಮಂಡಿಸಿ ಮಾತನಾಡಿದ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ. ನಾರಾಯಣಸ್ವಾಮಿ, ‘ರಾಷ್ಟ್ರೀಯ ಶಿಕ್ಷಣ ನೀತಿಯು ಆರ್‌ಎಸ್‌ಎಸ್‌ನ ಗುಪ್ತ ಕಾರ್ಯಸೂಚಿಯ ಭಾಗವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ. ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸಲಾಗಿದೆ. 25ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ದೂರಿದರು.

ವಿದ್ಯಾರ್ಥಿಗಳ ಮೇಲಿನ ಲಾಠಿ ಪ್ರಹಾರ ಕುರಿತು ‘ಪ್ರಜಾವಾಣಿ’ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾಗಿದ್ದ ವರದಿಯನ್ನು ಪ್ರದರ್ಶಿಸಿದ ಅವರು, ‘ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

ಈ ವಿಷಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದವೂ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉತ್ತರ ನೀಡಲಿದ್ದಾರೆ ಎಂದ ವಸತಿ ಸಚಿವ ವಿ. ಸೋಮಣ್ಣ ಎಲ್ಲರನ್ನೂ ಸಮಾಧಾನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.