ADVERTISEMENT

ನಾಯಕತ್ವ ಬದಲಾವಣೆ: ಯಾರೋ ಎಲ್ಲೋ ಹೋಗಿದ್ದಾರೆ ಎಂದು ಮಾತನಾಡಲ್ಲ– ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 27 ಮೇ 2021, 6:14 IST
Last Updated 27 ಮೇ 2021, 6:14 IST
   

ಬೆಂಗಳೂರು: ‘ನನ್ನ ಮುಂದೆ ಇರುವುದು ಕೋವಿಡ್. ಕೋವಿಡ್ ನಿಯಂತ್ರಿಸುವುದು ಮೊದಲ ಆದ್ಯತೆ. ಯಾರೋ ಒಬ್ಬರು ಎಲ್ಲೋ ಹೋಗಿದ್ದಾರೆ ಎಂದು ಮಾತನಾಡಲ್ಲ. ಅವರಿಗೆ ಉತ್ತರ ಕೊಟ್ಟು ಕಳಿಸಿದ್ದಾರಲ್ವಾ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆದರು.

ಸುದ್ದಿಗಾರರ ಜೊತೆ ಗುರುವಾರ ಬೆಳಿಗ್ಗೆ ಅವರು ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಎದ್ದಿರುವ ಗುಸುಗುಸು ಬಗ್ಗೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ನಾಯಕತ್ವದ ಬದಲಾವಣೆಗೆ ಆಗ್ರಹಿಸಿ ವರಿಷ್ಢರನ್ನು ಭೇಟಿ ಮಾಡಲು ಕೆಲವು ಬಿಜೆಪಿ ಶಾಸಕರು ದೆಹಲಿಗೆ ತೆರಳಿದ್ದರು ಎಂಬ ಬಗ್ಗೆ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದರು.

ಪಕ್ಷದ ಶಾಸಕಾಂಗ ಸಭೆ ಕರೆಯುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದನ್ನು ನಿಮ್ಮ ಜೊತೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ' ಎಂದರು.

ADVERTISEMENT

ಮೇಕೆದಾಟು ಯೋಜನೆ ವಿಚಾರದಲ್ಲಿ ಎನ್‌ಜಿಟಿ ಪ್ಯಾನಲ್‌ ರಚನೆ ಮಾಡಿರುವ ಬಗ್ಗೆ ಮಾತನಾಡಿದ ಯಡಿಯೂರಪ್ಪ, ‘ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅದನ್ನು ತಡೆಯಲು ಏನು ಮಾಡಬೇಕೊ ಮಾಡುತ್ತೇವೆ. ಹೈಕೋರ್ಟ್ ಮೊರೆ ಹೋಗುತ್ತೇವೆ. ಸುಪ್ರೀಂ ಕೋರ್ಟ್‌ಗೂ ಹೋಗುತ್ತೇವೆ' ಎಂದರು.

ಮೇಕೆದಾಟು ವಿಚಾರದಲ್ಲಿ ರಾಜ್ಯ ಸರ್ಕಾರದ ಮುಂದಿನ ನಡೆಯವ ಬಗ್ಗೆ ಕಾನೂನು ಸಚಿವ ಬಸವರಾಜ ಬೊಮ್ಮಾಯಿ‌, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ತಮ್ಮ‌ ನಿವಾಸ ‘ಕಾವೇರಿ’ಯಲ್ಲಿ ಮುಖ್ಯಮಂತ್ರಿ ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.