ADVERTISEMENT

ನಾಯಕತ್ವ ಬದಲಾವಣೆ; ರಾಹುಲ್‌ ಗಾಂಧಿ ತೀರ್ಮಾನಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 8:26 IST
Last Updated 22 ಡಿಸೆಂಬರ್ 2025, 8:26 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸೋಮವಾರ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕಾಂಗ್ರೆಸ್‌ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್‌ ಜೊತೆಗಿದ್ದಾರೆ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸೋಮವಾರ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕಾಂಗ್ರೆಸ್‌ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್‌ ಜೊತೆಗಿದ್ದಾರೆ

   

ಮೈಸೂರು: ‘ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದೇನೆ. ನಾವು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು’ ಎಂದರು.

ADVERTISEMENT

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಒಪ್ಪಬೇಕಾದ ವಿಚಾರ. ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವೇ ಇಲ್ಲ’ ಎಂದ ಅವರು, ‘ಸಮಸ್ಯೆಗಳೇನಿದ್ದರೂ ಅದನ್ನು ಹೈಕಮಾಂಡ್ ಬಗೆಹರಿಸುತ್ತದೆ’ ಎಂದು ಹೇಳಿದರು.

‘ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದಲ್ಲೇ ಹೆಚ್ಚಾಚಾಗಿ ಚರ್ಚೆಯಾಗುತ್ತಿದೆ. ಆ ವಿಷಯದಲ್ಲಿ ಇಷ್ಟೊಂದು ಪ್ರಶ್ನಿಸುವ ಅಗತ್ಯವೇನಿದೆ? ವಿಧಾನಸಭೆಯಲ್ಲಿ ಹೇಳಿದ ಮೇಲೂ ಮತ್ತೆ ಚರ್ಚಿಸುವ ಅಗತ್ಯವಿಲ್ಲ’ ಪ್ರತಿಪಾದಿಸಿದರು.

‘ಸಂಕ್ರಾಂತಿಗೆ ಕ್ರಾಂತಿಯೂ ಇಲ್ಲ, ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ‌’ ಎಂದು ಪುನರುಚ್ಚರಿಸಿದರು.

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಾನುವಾರ ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಪಕ್ಷದ ಅಧ್ಯಕ್ಷರನ್ನು ಯಾರಾದರೂ ಭೇಟಿಯಾದರೆ ತಪ್ಪೇನು? ಭೇಟಿಯಾಗಲಿ’ ಎಂದು ಹೇಳಿದರು.

‘ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನೇ’ ಎಂಬ ಶಿವಕುಮಾರ್ ಹೇಳಿಕೆಗೆ, ‘ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಅದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿ ಆಗಿದ್ದರು, ಸರ್ಕಾರ ಮಾಡಿತ್ತು’ ಎಂದು ಪ್ರತಿಕ್ರಿಯಿಸಿದರು.

‘ರಾಜ್ಯ ಬಜೆಟ್ ಸಿದ್ಧತೆ ನಡೆದಿದೆಯೇ’ ಎಂಬ ಪ್ರಶ್ನೆಗೆ, ‘ತಯಾರಿ ನಡೆಸುವಾಗ ತಿಳಿಸುವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.