
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ
(ಸಂಗ್ರಹ ಚಿತ್ರ)
ಕಾರವಾರ: ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರಂತೆ ಇಬ್ಬರೂ ಸೇರಿ ಹೈಕಮಾಂಡ್ ಅನ್ನು ಒಪ್ಪಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಅಂಕೋಲಾದ ಆಂದ್ಲೆ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷದ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ನಾನೆಂದೂ ಹೇಳಿಲ್ಲ. ಹೈಕಮಾಂಡ್ ಅವರ ಪರವಾಗಿದ್ದ ಕಾರಣಕ್ಕೆ ಅವರು ಮುಖ್ಯಮಂತ್ರಿ ಆಗಿದ್ದಾರೆ ಎಂದರು.
ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ಮಾತುಕತೆ ನಡೆಸಿ, ಒಟ್ಟಾಗಿ ಸಾಗುತ್ತೇವೆ ಎಂದರು.
ಐದು ವರ್ಷಗಳ ಹಿಂದೆ ಆಂದ್ಲೆ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ, ಇಷ್ಟಾರ್ಥಕ್ಕೆ ಪ್ರಾರ್ಥಿಸಿದ್ದೆ. ಪ್ರಾರ್ಥನೆ ಫಲಿಸಿತ್ತು. ಮತ್ತೆ ಇಲ್ಲಿಗೆ ಬಂದಿದ್ದೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.