ADVERTISEMENT

ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು: ಆರ್ಥಿಕ ಇಲಾಖೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 17:19 IST
Last Updated 4 ಜನವರಿ 2021, 17:19 IST
ನಗದು–ಪ್ರಾತಿನಿಧಿಕ ಚಿತ್ರ
ನಗದು–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್‌ನಿಂದ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕೆ 2021ರ ಜನವರಿ 1ರಿಂದ ಡಿಸೆಂಬರ್‌ 31ರವರೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಅವಧಿಯಲ್ಲಿ ನಿವೃತ್ತರಾಗುವ ಅಧಿಕಾರಿಗಳು ಮತ್ತು ನೌಕರರಿಗೆ ರಜೆ ನಗದೀಕರಣ ಸೌಲಭ್ಯ ಇರಲಿದೆ. ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳು, ನಿಗಮ, ಮಂಡಳಿಗಳು, ಸರ್ಕಾರದಿಂದ ನೆರವು ಇಲ್ಲವೇ ಅನುದಾನ ಪಡೆಯುವ ಮತ್ತು ಪಡೆಯದಿರುವ ಎಲ್ಲ ಸರ್ಕಾರಿ ಉದ್ದಿಮೆಗಳ ನೌಕರರಿಗೂ ಈ ಸೌಲಭ್ಯ ಇರುವುದಿಲ್ಲ ಎಂದು ಆರ್ಥಿಕ ಇಲಾಖೆ ಹೊರಡಿಸಿದ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT