ADVERTISEMENT

ಚಿತ್ರೀಕರಣ ಬಿಟ್ಟು ಉಳಿದ ತಾಂತ್ರಿಕ ಕೆಲಸಗಳನ್ನು ಮಾಡಿಕೊಳ್ಳಿ: ಆರ್. ಅಶೋಕ್

​ಪ್ರಜಾವಾಣಿ ವಾರ್ತೆ
Published 10 ಮೇ 2020, 10:22 IST
Last Updated 10 ಮೇ 2020, 10:22 IST
 ಕಂದಾಯ ಸಚಿವ ಆರ್. ಅಶೋಕ್‌
ಕಂದಾಯ ಸಚಿವ ಆರ್. ಅಶೋಕ್‌   

ಬೆಂಗಳೂರು: ‘ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಸದ್ಯ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಆದರೆ, ಉಳಿದ ತಾಂತ್ರಿಕ ಕೆಲಸಗಳನ್ನು ಮಾಡಿಕೊಳ್ಳಬಹುದು’ ಎಂದು ಕಂದಾಯ ಸಚಿವ ಆರ್. ಅಶೋಕ್‌ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ನಿರ್ಮಾಪಕರ ಸಂಘದ ಸದಸ್ಯರಿಗೆ ಈ ಕುರಿತು ಸೂಚನೆ ನೀಡಿರುವ ಅಶೋಕ್, ‘ಚಿತ್ರೀಕರಣಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ನಿಯಂತ್ರಣ ನಿಯಮ ಪಾಲನೆ ಕಷ್ಟವಾಗಬಹುದು. ಆದರೆ, ಡಬ್ಬಿಂಗ್, ಎಡಿಟಿಂಗ್, ಗ್ರಾಫಿಕ್ಸ್‌, ರಿರೆಕಾರ್ಡಿಂಗ್‌ನಂತಹ ಚಟುವಟಿಕೆಯನ್ನು ನಡೆಸಬಹುದು. ಈ ವೇಳೆಯೂ, ಸರ್ಕಾರದ ಆದೇಶ ಮತ್ತು ನಿಯಮ ಪಾಲಿಸಬೇಕು’ ಎಂದು ಹೇಳಿದ್ದಾರೆ.

ತಾಂತ್ರಿಕ ಚಟುವಟಿಕೆ ನಡೆಸಲು ಅನುಮತಿ ನೀಡಿರುವ ಸರ್ಕಾರಕ್ಕೆ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ಕುಮಾರ್ ಧನ್ಯವಾದ ತಿಳಿಸಿದ್ದಾರೆ.

ADVERTISEMENT

ಸಂಘದ ಉಪಾಧ್ಯಕ್ಷ ಎಂ.ಜಿ.ರಾಮಮೂರ್ತಿ, ಕಾರ್ಯದರ್ಶಿ ಕೆ.ಮಂಜು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎ.ಗಣೇಶ್ , ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.