ADVERTISEMENT

ಉಪನ್ಯಾಸಕರ ನೇಮಕಾತಿ; ನಿಗದಿಯಂತೆ ಮಂಗಳವಾರವೂ ಲಿಖಿತ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2022, 22:15 IST
Last Updated 14 ಮಾರ್ಚ್ 2022, 22:15 IST
   

ಬೆಂಗಳೂರು:ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಲಿಖಿತ ಪರೀಕ್ಷೆ ನಿಗದಿಯಂತೆ ಮಂಗಳವಾರವೂ (ಮಾ.15) ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರು ತಿಳಿಸಿದ್ದಾರೆ.

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಂಗಳವಾರ‌ ತೀರ್ಪು ನೀಡುತ್ತಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಣೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಲ್ಲ. ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಅವರು‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದೇ 16ಕ್ಕೆ ಪರೀಕ್ಷೆಗಳು ಮುಗಿಯಲಿವೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.