ADVERTISEMENT

ಮೈಸೂರು ಪಾಲಿಕೆಯ ಎಲ್ಲ ಬೀದಿದೀಪಗಳಿಗೆ ₹109.91 ಕೋಟಿ ವೆಚ್ಚದಲ್ಲಿ ಎಲ್‌ಇಡಿ ಬಲ್ಬ್

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 10:54 IST
Last Updated 15 ಸೆಪ್ಟೆಂಬರ್ 2020, 10:54 IST
ಮೈಸೂರು ನಗರದ ರಸ್ತೆಗಳಲ್ಲಿ ಅಳವಡಿಸಿರುವ ಬೀದಿ ದೀಪಗಳು
ಮೈಸೂರು ನಗರದ ರಸ್ತೆಗಳಲ್ಲಿ ಅಳವಡಿಸಿರುವ ಬೀದಿ ದೀಪಗಳು    

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

₹109.91 ಕೋಟಿ ಅಂದಾಜು ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿಗೆ ತರಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮೈಸೂರಿನಲ್ಲಿ ಪೈಲಟ್‌ ಯೋಜನೆಯಾಗಿ ಜಾರಿ ಮಾಡುತ್ತಿದ್ದು, ಇಲ್ಲಿ ಯಶಸ್ವಿಯಾದರೆ ರಾಜ್ಯ ಎಲ್ಲ ನಗರ ಮತ್ತು ಪಟ್ಟಣಗಳಿಗೂ ಎಲ್‌ಇಡಿ ಬಲ್ಬ್‌ಗಳನ್ನೇ ಅಳವಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಮೈಸೂರಿನಲ್ಲಿ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸುವುದರಿಂದ ವಾರ್ಷಿಕ ₹58 ಕೋಟಿ ವಿದ್ಯುತ್‌ ಕಂಪನಿಗೆ ಉಳಿತಾಯವಾಗುತ್ತದೆ ಎಂದು ಹೇಳಿದರು.

ADVERTISEMENT

ಮೈಸೂರು ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಿಸಲು ಕಾಮಗಾರಿಯ ಪರಿಷ್ಕೃತ ಅಂದಾಜು ಪಟ್ಟಿ ₹84.69 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ 453 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಎಸ್‌.ಎಂ.ಕೃಷ್ಣ ನಗರ ವಸತಿ ಬಡಾವಣೆಯಲ್ಲಿ ವಿದ್ಯುತ್‌ ವಿತರಣಾ ಕೇಂದ್ರವನ್ನು ₹15.34 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.