ಬೆಂಗಳೂರು: ‘ಅಯೋಧ್ಯೆಗೆ ತೆರಳುವ ಜನರಲ್ಲಿ ಭಯ ಹುಟ್ಟಿಸಲು ಬಿ.ಕೆ. ಹರಿಪ್ರಸಾದ್ ಈ ರೀತಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣವಾಗುತ್ತಿರುವ ಈ ಸಂದರ್ಭದಲ್ಲಿ ಇಡೀ ದೇಶದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವುದನ್ನು ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರು ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾರೆ ಎಂದರು.
ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಮುಖ ಕೇಂದ್ರವಾಗಿತ್ತು. ಹೀಗಾಗಿ ಅಲ್ಲಿ ಅನೇಕರ ಮೇಲೆ ಪ್ರಕರಣಗಳಿದ್ದವು. ಅವರನ್ನು ಈ ಸಂದರ್ಭದಲ್ಲಿ ಬಂಧಿಸುವ ಅಗತ್ಯವೇನಿತ್ತು? ಅಪರಾಧಿಗಳನ್ನು ಹಿಡಿಯಬಾರದಾ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ಅಪರಾಧಿಗಳನ್ನು ಹಿಡಿಯಬೇಕೆಂದರೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡಗಳಲ್ಲಿ ಅಕ್ರಮ ದಂಧೆಯಲ್ಲಿ ತೊಡಗಿರುವ, ಸಾರಾಯಿ ಮಾರಾಟ ಮಾಡುತ್ತಿರುವ ಪ್ರಕರಣಗಳು ಇವರ ಕಣ್ಣಿಗೆ ಕಾಣಿಸುತ್ತಿಲ್ಲವೆ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.