ಬೆಂಗಳೂರು: ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಅವರು ವಿಧಾನ ಪರಿಷತ್ತಿನ ಮಂಗಳವಾರದ ಕಲಾಪದ ಶೂನ್ಯವೇಳೆಯಲ್ಲಿ ‘ಪ್ರಜಾವಾಣಿ’ಯ ವರದಿಯನ್ನು ಉಲ್ಲೇಖಿಸಿದರು.
ಇವಿಎಂ ತಿರುಚುವಿಕೆ, ಚುನಾವಣಾ ಆಯೋಗವು ಬಿಹಾರದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರು ಮಾಡಿರುವ ಮತ ಕಳ್ಳತನದ ಆರೋಪ ಕುರಿತು ‘ವೋಟ್ ಫಾರ್ ಡೆಮಾಕ್ರಸಿ’ ಮತ್ತು ‘ಎದ್ದೇಳು ಕರ್ನಾಟಕ’ ಸಂಘಟನೆಗಳು ಸೋಮವಾರ ದುಂಡುಮೇಜಿನ ಸಭೆ ಆಯೋಜಿಸಿದ್ದವು.
ಈ ಸಭೆಯ ನಿರ್ಣಯಗಳ ಬಗ್ಗೆ ‘ಪ್ರಜಾವಾಣಿ’ಯ ಮಂಗಳವಾರದ ಸಂಚಿಕೆಯಲ್ಲಿ, ‘ಇವಿಎಂ ದುರ್ಬಳಕೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ ಎಂಬ ತಲೆಬರಹದ ಅಡಿಯಲ್ಲಿ ವರದಿ ಪ್ರಕಟವಾಗಿತ್ತು.
ಹರಿಪ್ರಸಾದ್ ಅವರು ಈ ವರದಿಯನ್ನು ಉಲ್ಲೇಖಿಸಿ, ‘ಚುನಾವಣಾ ಆಯೋಗವು ಬಿಜೆಪಿಯ ಪರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಬೆಂಬಲಿಸದ ಮತದಾರರನ್ನು, ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಸಭೆಯಲ್ಲಿ ಆರೋಪಿಸಲಾಗಿದೆ. ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿ ಸರ್ಕಾರವು ನಿರ್ಣಯ ಕೈಗೊಳ್ಳಬೇಕು. ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.