ಕುಣಿಗಲ್: ತಾಲ್ಲೂಕಿನ ನಡೆಮಾವಿನಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು 6 ವರ್ಷದ ಗಂಡು ಚಿರತೆ ಮೃತಪಟ್ಟಿದೆ.
ಚಿರತೆ ಸಮೀಪದ ರಂಗಸ್ವಾಮಿ ಗುಡ್ಡದ ಅರಣ್ಯ ಪ್ರದೇಶದಿಂದ ಆಹಾರ ಹುಡುಕಿ ಹೊರಟಿತ್ತು ಎನ್ನಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ತಾಲ್ಲೂಕಿನಲ್ಲಿ ವಾಹನ ಡಿಕ್ಕಿ ಹೊಡೆದು 7 ಚಿರತೆಗಳು ಮೃತಪಟ್ಟಿದೆ. ಈ ಹೆದ್ದಾರಿಯಲ್ಲಿಯೇ 3 ಚಿರತೆಗಳು ಬಲಿಯಾಗಿವೆ.
‘ವಾಹನ ಚಾಲಕರು ವೇಗದ ಮಿತಿ ಪಾಲಿಸುವಂತೆ ಸೂಚನಾ ಫಲಕ ಅಳವಡಿಸಿದ್ದೇವೆ. ಆದರೂ ಪ್ರಯೋಜನವಾಗಿಲ್ಲ’ ಎಂದು ವಲಯ ಅರಣ್ಯಾಧಿಕಾರಿ ರವಿ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.