
ಶ್ರೇಯಸ್
ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಯಾತ್ರಾಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರನ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಶ್ರೇಯಸ್ (8) ಗಾಯಗೊಂಡ ಬಾಲಕ.
ಮಂಗಳವಾರ ಬೆಳಿಗ್ಗೆ ಕುಟುಂಬದೊಂದಿಗೆ ತಾಳುಬೆಟ್ಟದಿಂದ ಮಲೆ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಹೊಗುವಾಗ ಏಳನೇ ತಿರುವಿನಲ್ಲಿ ಚಿರತೆ ದಾಳಿ ನಡೆಸಿದೆ. ಜೊತೆಗಿದ್ದವರ ಕಿರುಚಾಟ ಕೇಳಿ ಚಿರತೆ ಪರಾರಿಯಾಗಿದೆ. ಬಾಲಕನ ಕಿವಿಗೆ ಗಾಯಗಳಾಗಿದ್ದು ಮಹದೇಶ್ವರ ಬೆಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಜ.21ರಂದು ಮಂಡ್ಯ ಜಿಲ್ಲೆಯ ಚೀರನಹಳ್ಳಿಯಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಬರುವಾಗ ತಾಳಬೆಟ್ಟದ ಬಳಿ ಚಿರತೆ ದಾಳಿಯಿಂದ ಪ್ರವೀಣ್ ಎಂಬುವರು ಮೃತಪಟ್ಟಿದ್ದರು.
ಇದೀಗ ಬಾಲಕನ ಮೇಲೆ ದಾಳಿ ನಡೆದಿರುವುದು ಪಾದಯಾತ್ರಿಗಳಲ್ಲಿ ಆತಂಕ ಹುಟ್ಟಿಸಿದೆ. ಚಿರತೆ ಸೆರೆಗೆ ಭಕ್ತರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.