ADVERTISEMENT

ಸರ್ಕಾರ–ಪರಿಷತ್ತು ಒಟ್ಟಾಗಿ ಕನ್ನಡ ಕಟ್ಟಲಿವೆ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 19:31 IST
Last Updated 4 ಆಗಸ್ಟ್ 2022, 19:31 IST
ಕನ್ನಡ ಸಾಹಿತ್ಯ ಪರಿಷತ್ತಿನ ಮೊಬೈಲ್ ಆ್ಯಪ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು. ಶಾಸಕ ನೆಹರು ಓಲೆಕಾರ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ ಜೋಶಿ, ವಸತಿ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಇದ್ದರು

ಬೆಂಗಳೂರು: ‘ಸರ್ಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಒಟ್ಟಾಗಿ ಕನ್ನಡ ಕಟ್ಟುವ ಕೆಲಸ ಮಾಡಲಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತುಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕನ್ನಡ ಭಾಷೆಗೆ ದೇಶದಲ್ಲಿ ಅಗ್ರ ಸ್ಥಾನವಿದೆ. ಅದಕ್ಕೆ ತಕ್ಕಂತೆ ಆಯಾ ಕಾಲಘಟದಲ್ಲಿ ಸವಾಲುಗಳು ಬಂದೇ ಬರುತ್ತವೆ. ಕನ್ನಡ ಉಳಿಸಿ ಎಲ್ಲ ರಂಗದಲ್ಲಿ ಬೆಳೆಸುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸರ್ಕಾರ ಜೊತೆಯಾಗಿ ಮುನ್ನಡೆಯಲಿದೆ’ ಎಂದರು.

‘ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಯಶಸ್ವಿಗೊಳಿಸಲಾಗುವುದು. ಇದೇ ಕಾರಣಕ್ಕೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ’ ಎಂದು
ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.