ಮಡಿಕೇರಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಲಹೆಯನ್ನು ಗೌರವಿಸುತ್ತೇವೆ. ಆದರೆ, ಕೇಂದ್ರ ಸಚಿವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ರಾಜೀನಾಮೆಯನ್ನೂ ಕೇಳಲಿ’ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಇಲ್ಲಿ ಭಾನುವಾರ ಹೇಳಿದರು.
‘ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿಯ ಸಲಹೆಯನ್ನು ಪಾಲಿಸಬೇಕು ಎಂದೇನಿಲ್ಲ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಆ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಕೈವಾಡ ಏನಿದೆ ಎಂಬುದನ್ನು ಮೊದಲು ಸಾಬೀತುಪಡಿಸಲಿ, ನಂತರ ರಾಜೀನಾಮೆ ಕೊಡುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.