: ‘ಜಾತಿಗಣತಿ
ಬೆಂಗಳೂರು: ‘ಮರು ಜಾತಿಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದಿಂದ ಗೊಂದಲಗಳು ಬಗೆಹರಿಯಬೇಕು, ನಿಗದಿತ ಕಾಲಾವಧಿಯಲ್ಲಿ ಸಮೀಕ್ಷೆ ಮುಗಿಯಬೇಕು’ ಎಂದು ಶಾಸಕ ದಿನೇಶ್ ಗೂಳಿಗೌಡ ಅಭಿಪ್ರಾಯಪಟ್ಟರು.
‘ಹಿಂದುಳಿದ ವರ್ಗಗಳ ಆಯೋಗ ಈ ಹಿಂದೆ ನಡೆಸಿದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರ ತಾತ್ವಿಕವಾಗಿ ಒಪ್ಪುತ್ತದೆ ಎಂದು ಹೇಳಿತ್ತು. ಆದರೆ, ಮಠಾಧೀಶರು, ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳು, ಪ್ರಮುಖ ಜಾತಿ ಸಂಘಟನೆಗಳು ಮರು ಜಾತಿಗಣತಿಗೆ ಒತ್ತಾಯಿಸಿದ್ದರು. ಈ ಹಿಂದೆ ಮಾಡಿದ ಜಾತಿ ಗಣತಿಯಲ್ಲಿ ಹಲವು ಗೊಂದಲಗಳಿವೆ ಎಂದು ಆಕ್ಷೇಪಿಸಿದ್ದವು. ಮರು ಜಾತಿಗಣತಿಯಿಂದ ಎಲ್ಲವೂ ಸರಿಹೋಗುವ ವಿಶ್ವಾಸವಿದೆ’ ಎಂದು ಹೇಳಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಮರು ಜಾತಿಗಣತಿಗೆ ನಿರ್ಣಯಿಸಿ ಅಭಿನಂದನಾರ್ಹ ಕೆಲಸ ಮಾಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.