ADVERTISEMENT

ನೌಕರರ ಸೌಲಭ್ಯ ‘ಸಕಾಲ’ ವ್ಯಾಪ್ತಿಗೆ ಬರಲಿ: ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2024, 16:19 IST
Last Updated 27 ಡಿಸೆಂಬರ್ 2024, 16:19 IST
   

ಬೆಂಗಳೂರು: ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿ ಒದಗಿಸಲು ಅವೆಲ್ಲವನ್ನು ಸಕಾಲ ವ್ಯಾಪ್ತಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘ ಆಗ್ರಹಿಸಿದೆ.

ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್‌ ಅವರು, ‘ಮುಂಬಡ್ತಿ, ವರ್ಗಾವಣೆ, ವಾರ್ಷಿಕ ವೇತನ ಬಡ್ತಿ, ಅನುಕಂಪದ ಆಧಾರದ ಮೇಲೆ ನೌಕರಿ, ನಿವೃತ್ತಿ ವೇತನ ಉಪದಾನ, ಗಳಿಕೆ ರಜೆ ಸೌಲಭ್ಯಗಳನ್ನು ಪಡೆಯಲು ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಗೆ ಹೆಚ್ಚಿನ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ ಈ ಸೌಲಭ್ಯಗಳನ್ನು ‘ಸಕಾಲ’ದ ವ್ಯಾಪ್ತಿಗೆ ತರಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.

‘ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ಕರ್ತವ್ಯಲೋಪದ ಮೇಲೆ ಅಮಾನತು ತೆರವು ಆದೇಶಗಳೂ ಕಾರ್ಯಗತವಾಗಲು ತಿಂಗಳು, ವರ್ಷವಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.