ADVERTISEMENT

5 ರಿಂದ 8ರವರೆಗೆ ಶಾಲೆ ಆರಂಭಕ್ಕೆ ಸಿ.ಎಂಗೆ ಪ್ರೊ. ಎಂ.ಆರ್‌. ದೊರೆಸ್ವಾಮಿ ಮನವಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 17:44 IST
Last Updated 29 ಜನವರಿ 2021, 17:44 IST
   

ಬೆಂಗಳೂರು: ‘ರಾಜ್ಯದಲ್ಲಿ ಐದರಿಂದ ಎಂಟನೇ ತರಗತಿವರೆಗಿನ ತರಗತಿಗಳನ್ನೂ ಫೆ. 8ರಿಂದ ಆರಂಭಿಸಬೇಕು’ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ. ಎಂ.ಆರ್‌. ದೊರೆಸ್ವಾಮಿ ಮನವಿ ಮಾಡಿದ್ದಾರೆ.

ಈ ಸಂಬಂಧ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಅವರು ಪತ್ರ ಬರೆದಿದ್ದಾರೆ.

‘ಕೊರೊನಾ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ನೆರೆಯ ರಾಜ್ಯಗಳು ಈಗಾಗಲೇ ಎಲ್ಲ ಹಂತಗಳ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಿವೆ. ಹೀಗಾಗಿ, ರಾಜ್ಯದಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳನ್ನು ಆರಂಭಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

‘ಶಿಕ್ಷಣ ತಜ್ಞರು ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಶಾಲೆಗಳನ್ನು ಆರಂಭಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದೂ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.