ಕಲಬುರಗಿ: 'ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಕಳುಹಿಸಿದ್ದಾರೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೆಲವು ಕೆಟ್ಟ ಪದಗಳನ್ನು ಬಳಸಿ ನನ್ನ ಕುಟುಂಬ ಸದಸ್ಯರನ್ನು ನಿಂದಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖ ಮಾಡಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದೆ. ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ' ಎಂದರು.
'ಬಿಜೆಪಿಯ ಮುಖಂಡರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಸಜ್ಜಾಗಿದ್ದಾರೆ' ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.