ಬೆಂಗಳೂರು: ‘ನಾವು (ರಾಜ್ಯ ಸರ್ಕಾರ) ಯಾರನ್ನೂ ವಿಭಜಿಸುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿಯೇ ಭಿನ್ನಮತವಿದೆಯೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ವಿಚಾರವನ್ನು ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಆ ಬಗ್ಗೆ ನಾವು ಚಿಂತಿಸುವುದಿಲ್ಲ’ ಎಂದರು.
‘ಲಿಂಗಾಯತ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಆ ಸಮುದಾಯದವರ ಗುರುತು ಕೇಳುತ್ತಿದ್ದೇವೆ. ಅದರ ಹೊರತಾಗಿ ನಮ್ಮ ಮುಂದೆ ಬೇರೆ ಯಾವುದೇ ಆಲೋಚನೆಗಳಿಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.