ADVERTISEMENT

ಲಿಂಗಾಯತ ಧರ್ಮ ಹೋರಾಟದ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಿಲುವು ಸ್ಪಷ್ಟಪಡಿಸಲಿ: ಜೋಶಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 5:53 IST
Last Updated 16 ಏಪ್ರಿಲ್ 2019, 5:53 IST
ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ   

ಹುಬ್ಬಳ್ಳಿ: ‘ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸ್ಪಷ್ಟ ನಿಲುವು ಇಲ್ಲ. ಸಮಾಜಕ್ಕೆ ಒಳ್ಳೆಯದು ಮಾಡುವ ವಿಚಾರದಿಂದ ಈ ಹೋರಾಟ ಮಾಡುತ್ತಿಲ್ಲ. ಕಾಂಗ್ರೆಸ್ ಮೊದಲಿನಿಂದಲೂ ಎಡಬಿಡಂಗಿ ನೀತಿ, ಹಿಂದೂವಿರೋಧಿ ನೀತಿಯಿಂದ ಕಾರ್ಯನಿರ್ವಹಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್- ಜೆಡಿಎಸ್ ನಿಲುವುಗಳು ಬದಲಾಗುತ್ತಿರುತ್ತವೆ’ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಟೀಕಿಸಿದರು.

ರಾಜಕೀಯ ಲಾಭದ ಉದ್ದೇಶ: ಶೆಟ್ಟರ್
‘ಪ್ರತ್ಯೇಕ ಧರ್ಮದ ಹೋರಾಟವನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸುತ್ತಿರುವುದು ಸಚಿವ ಎಂ.ಬಿ.ಪಾಟೀಲ ಅವರು ಸೋನಿಯಾ ಗಾಂಧಿಗೆ ಬರೆದ ಪತ್ರದಿಂದ ಸಾಬೀತಾಗಿದೆ.

ಸಿಎಂ ಕುಮಾರಸ್ವಾಮಿ ಹತಾಶರಾಗಿದ್ದಾರೆ. ದೇವೇಗೌಡರ ಕುಟುಂಬ ಮತ್ತೆ ಅಳುಮುಂಜಿತನ ಪ್ರದರ್ಶಿಸುತ್ತಿದೆ. ಕುಮಾರಸ್ವಾಮಿ ಪ್ರತಿಪಕ್ಷದ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ.

ADVERTISEMENT

ಮೊದಲ ಹಂತದ ಚುನಾವಣೆ ಬಹಿರಂಗ ಪ್ರಚಾರ ಮುಗಿಯುತ್ತ ಬಂದರೂ ಕಾಂಗ್ರೆಸ್-ಜೆಡಿಎಸ್ ಗೊಂದಲ ಮುಂದುವರಿದಿದೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.