ADVERTISEMENT

ಲಿಂಗಾಯತಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಇಲ್ಲ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 2 ಜನವರಿ 2019, 20:24 IST
Last Updated 2 ಜನವರಿ 2019, 20:24 IST

ನವದೆಹಲಿ: ಲಿಂಗಾಯತ, ವೀರಶೈವ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತಸ್ಥಾನಮಾನ ನೀಡುವ ಸಂಬಂಧ ಕರ್ನಾಟಕ ಸರ್ಕಾರ ಮಾಡಿದ್ದ ಶಿಫಾರಸನ್ನು ತಿರಸ್ಕರಿಸಿರುವುದಾಗಿ ಕೇಂದ್ರ ಸರ್ಕಾರಬುಧವಾರ ಲೋಕಸಭೆಯಲ್ಲಿ ತಿಳಿಸಿತು.

ಕೇಂದ್ರದ ಅಲ್ಪಸಂಖ್ಯಾತ ಖಾತೆ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿಸದಸ್ಯರೊಬ್ಬರ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಅಲ್ಪಸಂಖ್ಯಾತ ಸ್ಥಾನ ಮಾನ ನೀಡುವ ಯಾವುದೇ ಸಮುದಾಯಗಳ ಪಟ್ಟಿ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತ ಮತ್ತು ವೀರಶೈವ ಸಮುದಾಯದವರು ಬಸವತತ್ವದಲ್ಲಿ ನಂಬಿಕೆ ಇಟ್ಟು ಪಾಲನೆ ಮಾಡುತ್ತಿದ್ದಾರೆ ಈ ಸಮುದಾಯಕ್ಕೆ ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯ್ದೆಯ (1992) ಅನ್ವಯ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕರ್ನಾಟಕ ಸರ್ಕಾರ ಕಳೆದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ADVERTISEMENT

ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಕರ್ನಾಟಕ ಸರ್ಕಾರದ ಶಿಫಾರಸು ಕುರಿತಂತೆ ಚರ್ಚಿಸಿ ಮತ್ತುಅಳವಾಗಿ ಅಧ್ಯಯನ ನಡೆಸಿ, ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಾಡಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.