ADVERTISEMENT

ಲಿಂಗಾಯತ: ಬೀದಿ ರಂಪಾಟ ಸಾಕು, ಕಾನೂನು ಹೋರಾಟಕ್ಕೆ ಸಜ್ಜಾಗುವ ಅಗತ್ಯವಿದೆ- ಶರಣರು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2018, 12:24 IST
Last Updated 19 ಅಕ್ಟೋಬರ್ 2018, 12:24 IST
ಚಿತ್ರದುರ್ಗದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಮೆರವಣಿಗೆಯಲ್ಲಿ ಶಿವಮೂರ್ತಿ ಮುರುಘಾ ಶರಣರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಟಿ ಸುರಿಯಲಾಯಿತು.ಚಿತ್ರ– ಭವಾನಿ ಮಂಜು
ಚಿತ್ರದುರ್ಗದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಮೆರವಣಿಗೆಯಲ್ಲಿ ಶಿವಮೂರ್ತಿ ಮುರುಘಾ ಶರಣರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಟಿ ಸುರಿಯಲಾಯಿತು.ಚಿತ್ರ– ಭವಾನಿ ಮಂಜು   

ಚಿತ್ರದುರ್ಗ: ಲಿಂಗಾಯತ ಸ್ವತಂತ್ರ ಧರ್ಮದ ಸ್ಥಾನಕ್ಕೆ ಬೀದಿ ರಂಪಾಟ ಮಾಡಿದ್ದು ಸಾಕು. ನ್ಯಾಯಾಲಯದಲ್ಲಿ ಕಾನೂನು ಹೋರಾಟಕ್ಕೆ ಸಜ್ಜಾಗುವ ಅಗತ್ಯವಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ‘ಲಿಂಗಾಯತ ಸ್ವತಂತ್ರ ಧರ್ಮ – ಮುನ್ನೋಟ’ ವಿಚಾರಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ನಮ್ಮ ರಾಷ್ಟ್ರದ ಎಲ್ಲ ಧರ್ಮಗಳಿಗೂ ಸ್ವತಂತ್ರ ಧರ್ಮದ ಸ್ಥಾನಮಾನ ಸಿಕ್ಕಿದೆ. ಆದರೆ, 12ನೇ ಶತಮಾನದಷ್ಟು ಹಳೆಯದಾದ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಸ್ಥಾನಮಾನ ನೀಡುವಲ್ಲಿ ವಿಳಂಬವಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಬಸವ ತತ್ವ ಪರಿಪಾಲಕರಲ್ಲಿ ಹಲವು ಗೊಂದಲಗಳಿವೆ. ಬಸವಣ್ಣನವರನ್ನು ಮುಂದಿಟ್ಟುಕೊಂಡು ಹೊರಟ ನಮ್ಮನ್ನು ಪೀಠದಿಂದ ಕೆಳಗೆ ಇಳಿಸುವ ಪ್ರಯತ್ನ ನಡೆಯಿತು. ಇದಾವುದಕ್ಕೂ ನಾವು ಬಗ್ಗುವುದಿಲ್ಲ. ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಸ್ಥಾನ ದೊರಕಿಸುವುದೇ ನಮ್ಮ ಮುಂದಿನ ಗುರಿ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.