ADVERTISEMENT

ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗೆ ಹೋರಾಟ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 16:30 IST
Last Updated 10 ಜೂನ್ 2019, 16:30 IST
ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ   

ದಾವಣಗೆರೆ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರ ಕಿಸುವ ನಿಟ್ಟಿನಲ್ಲಿ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,‘ ರಾಜ್ಯದಲ್ಲಿರುವ ಮೂವರು ಕೇಂದ್ರ ಸಚಿವರು ಹಾಗೂ ಸಂಸದರ ಮೂಲಕ ಕೇಂದ್ರದ ಅಲ್ಪಸಂಖ್ಯಾತ ಸಚಿವರಿಗೆ ಒತ್ತಡ ತರಲಾಗುವುದು. ಜಾಗತಿಕ ಲಿಂಗಾಯತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಎಸ್‌.ಎಂ.ಜಾಮದಾರ ಅವರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್‌ ಮುಖಾಂತರ ನ್ಯಾಯ ಪಡೆದುಕೊಳ್ಳುವ ಬಗ್ಗೆ ಚರ್ಚೆ, ಕಾನೂನಾತ್ಮಕ ಹೋರಾಟ ಹಾಗೂ ಕೇಂದ್ರದ ಮೇಲೆ ಒತ್ತಡ ಹಾಕುವ ಹಂತದಲ್ಲಿ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಆಗಸ್ಟ್ 9ರಂದು ದೊಡ್ಡ ಮಟ್ಟದ ಹೋರಾಟ ನಡೆಯುತ್ತಿದೆ. ತಮಿಳುನಾಡು ಆಂಧ್ರಪ್ರದೇಶಗಳಲ್ಲಿ ಹೊಸ ಸರ್ಕಾರ ಬಂದಿದೆ. ಅಲ್ಲಿಯೂ ಲಿಂಗಾಯತ ಧರ್ಮದವರು ಶಾಸಕರಾಗಿದ್ದಾರೆ. ತೆಲಂಗಾಣ ಹಾಗೂ ಕೇರಳದಲ್ಲೂ ಹೋರಾಟ ನಡೆಯುತ್ತಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.