ADVERTISEMENT

ಯಡಿಯೂರಪ್ಪ ಭೇಟಿ ಮಾಡಿದ ಶಾಸಕ ಲಿಂಗೇಶ್‌

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 20:00 IST
Last Updated 4 ಆಗಸ್ಟ್ 2019, 20:00 IST

ಬೆಂಗಳೂರು: ಹಾಸನ ಜಿಲ್ಲೆ ಬೇಲೂರು ಕ್ಷೇತ್ರದ ಜೆಡಿಎಸ್‌ ಶಾಸಕ ಕೆ.ಎಸ್‌.ಲಿಂಗೇಶ್‌ ಭಾನುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸ ಧವಳಗಿರಿಗೆ ಲಿಂಗೇಶ್‌ ಭೇಟಿ ನೀಡಿದಾಗ ಪುಷ್ಪಗಿರಿಯ ಸೋಮಶೇಖರ ಸ್ವಾಮೀಜಿಯವರೂ ಜತೆಗಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶುಭ ಹಾರೈಸಲು ಬಂದಿರುವುದಾಗಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT