ADVERTISEMENT

ಕೆಎಸ್‌ಆರ್‌ಟಿಸಿ, ಬಿಎಂಟಿಸಿ: ಅಂಕಗಳ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 16:28 IST
Last Updated 1 ಆಗಸ್ಟ್ 2024, 16:28 IST
<div class="paragraphs"><p>ಕೆಎಸ್‌ಆರ್‌ಟಿಸಿ</p></div>

ಕೆಎಸ್‌ಆರ್‌ಟಿಸಿ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗೂ ಕೆಯುಡಬ್ಲ್ಯುಎಸ್‌ಡಿಬಿಯ ಖಾಲಿ ಹುದ್ದೆಗಳಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ತಾತ್ಕಾಲಿಕ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದೆ. 

ADVERTISEMENT

ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನಿರ್ವಾಹಕರ ಹುದ್ದೆಗಳು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಪ್ರಥಮ ದರ್ಜೆ ಸಹಾಯಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳಿಗೆ ಇದೇ ಜುಲೈ 13 ಮತ್ತು 14ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. 

ತಾತ್ಕಾಲಿಕ ಅಂಕಗಳ ಪಟ್ಟಿಗೆ ಆಕ್ಷೇಪಣೆಗಳನ್ನು ಆ.3ರ ಸಂಜೆ 5.30ರ ಒಳಗೆ ಪ್ರಾಧಿಕಾರದ ವೆಬ್‌ಸೈಟ್‌ ಮೂಲಕ ನಿಗದಿತ ಲಿಂಕ್‌ ಬಳಸಿ ಸಲ್ಲಿಸಬೇಕು ಎಂದು ಕೆಇಎ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.