ADVERTISEMENT

ಮುದ್ದಣ ಕಾವ್ಯ ಪ್ರಶಸ್ತಿಗೆ ಆಹ್ವಾನ 

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 12:50 IST
Last Updated 7 ಜುಲೈ 2021, 12:50 IST

ಮೂಡುಬಿದಿರೆ: ಕಾಂತಾವರ ಕನ್ನಡ ಸಂಘವು 2021ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ, ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಯು ₹ 10 ಸಾವಿರ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಆಸಕ್ತರು ಕನ್ನಡ ಸಂಘದ ಇ–ಮೇಲ್ ಐಡಿ ಮೂಲಕ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂಘದ ಸ್ಥಾಪಕ ಅಧ್ಯಕ್ಷ ಡಾ. ನಾ. ಮೊಗಸಾಲೆ (9900701666) ಅಥವಾ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ (9008978366) ಅವರನ್ನು ಸಂಪರ್ಕಿಸಬಹುದು. ಹಸ್ತಪ್ರತಿ ಸ್ವೀಕಾರಕ್ಕೆ ಸೆಪ್ಟೆಂಬರ್ 15 ಕೊನೆಯ ದಿನ. ನವೆಂಬರ್ 1ರಂದು ಪ್ರಶಸ್ತಿ ಘೋಷಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT