ADVERTISEMENT

ಕೋರ್ಟ್‌ ಕಲಾಪಗಳ ನೇರ ಪ್ರಸಾರಕ್ಕೆ ಸೌಕರ್ಯ ಒದಗಿಸಲು ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 15:41 IST
Last Updated 10 ಜನವರಿ 2022, 15:41 IST
   

ಬೆಂಗಳೂರು: ‘ಅಧೀನ ನ್ಯಾಯಾಲಯಗಳ ಕಲಾಪಗಳನ್ನು ನೇರ ಪ್ರಸಾರ ಮಾಡುವುದಕ್ಕೆ ಸಂಬಂಧಿಸಿದಂತೆ ಶೀಘ್ರವೇ ಮೂಲ ಸೌಕರ್ಯ ಒದಗಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಈ ಕುರಿತಂತೆ ವಕೀಲ ದಿಲ್‌ರಾಜ್‌ ರೋಹಿತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ರಾಜ್ಯದ ಅಧೀನ ನ್ಯಾಯಾಲಯಗಳ ಕಲಾಪಗಳನ್ನು ನೇರ ಪ್ರಸಾರ ಮಾಡುವುದಕ್ಕೆ ಸಂಬಂಧಿಸಿದಂತೆ ಅಗತ್ಯ ಮೂಲ ಸೌಕರ್ಯಕಲ್ಪಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಶೀಘ್ರವೇ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ.

ಹೈಕೋರ್ಟ್ ಕಲಾಪ ನೇರ ಪ್ರಸಾರಕ್ಕೆ ಸಂಬಂಧಿಸಿದ ‘ಕರ್ನಾಟಕ ರೂಲ್ಸ್ ಆನ್ ಲೈವ್ ಸ್ಟ್ರೀಮಿಂಗ್ ಆಂಡ್ ರೆಕಾರ್ಡಿಂಗ್ ಆಫ್ ಕೋರ್ಟ್ ಪ್ರೊಸಿಡಿಂಗ್ಸ್’ ನಿಯಮಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.