ADVERTISEMENT

ಪಿಎಲ್‌ಡಿ ಬ್ಯಾಂಕ್‌ಗಳಲ್ಲೂ ಕೃಷಿಗೆ ಶೂನ್ಯ ಬಡ್ಡಿ ಸಾಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 15:44 IST
Last Updated 22 ಮಾರ್ಚ್ 2025, 15:44 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುತ್ತಿರುವ ₹5 ಲಕ್ಷದವರೆಗಿನ ಶೂನ್ಯ ಬಡ್ಡಿಯ ಬೆಳೆ ಸಾಲವನ್ನು ಪಿಎಲ್‌ಡಿ ಬ್ಯಾಂಕ್‌ಗಳಿಗೂ ವಿಸ್ತರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್‌ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಶುಕ್ರವಾರ ಉತ್ತರಿಸಿದ ಅವರು, ‘ಪಿಎಲ್‌ಡಿ ಬ್ಯಾಂಕ್‌ಗಳಿಗೂ ಈ ಸವಲತ್ತು ವಿಸ್ತರಿಸುವುದರಿಂದ ಸರ್ಕಾರ ₹38 ಕೋಟಿ ಹೆಚ್ಚು ಮೊತ್ತವನ್ನು ಭರಿಸಬೇಕಾಗಿದೆ’ ಎಂದರು.

ADVERTISEMENT

ಸಾರಿಗೆ ನಿಗಮಗಳಿಗೆ ಹೆಚ್ಚುವರಿಯಾಗಿ 1,000 ಬಸ್‌ಗಳನ್ನು ಖರೀದಿಸಲಾಗುತ್ತದೆ ಎಂದು ಹೇಳಿದ್ದಾರೆ. ‘ಬಜೆಟ್‌ನಲ್ಲಿ 1,000 ಹೊಸ ಬಸ್‌ ಖರೀದಿಸಲಾಗುತ್ತದೆ ಎಂದು ಹೇಳಿದ್ದೆ. ಈಗ ಅದನ್ನು ಪರಿಷ್ಕರಿಸಲಾಗಿದೆ. ಹೊಸದಾಗಿ ಒಟ್ಟು 2,000 ಬಸ್‌ ಖರೀದಿಸಲಿದ್ದು, ಅಗತ್ಯ ಅನುದಾನ ಒದಗಿಸುತ್ತೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.