ADVERTISEMENT

ಈ ವರ್ಷ 33 ಲಕ್ಷ ರೈತರಿಗೆ ಸಾಲ: ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:30 IST
Last Updated 8 ಸೆಪ್ಟೆಂಬರ್ 2022, 19:30 IST
ಎಸ್‌.ಟಿ.ಸೋಮಶೇಖರ್‌
ಎಸ್‌.ಟಿ.ಸೋಮಶೇಖರ್‌   

ನವದೆಹಲಿ: ‘ಕರ್ನಾಟಕದಲ್ಲಿ2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹24 ಸಾವಿರ ಕೋಟಿ ಕೃಷಿ ಸಾಲ ವಿತರಿಸುವ ಗುರಿ ಇದೆ. ಅದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ತಿಳಿಸಿದರು.

ಇಲ್ಲಿ ಗುರುವಾರ ನಡೆದ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡಿ,‘ಕೇಂದ್ರ ಪ್ರಾಯೋಜಿತ ಯೋಜನೆಯಡಿ ₹228 ಕೋಟಿ ವೆಚ್ಚದಲ್ಲಿ 5,852 ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಕಂಪ್ಯೂಟರೀಕರಣ ಮಾಡಲಾಗುತ್ತಿದೆ’ ಎಂದರು.

‘ಸಹಕಾರ ಸಂಘಗಳ ಸದಸ್ಯರು ಮತ್ತು ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮರು ಆರಂಭಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರ ₹300 ಕೋಟಿ ಮೀಸಲಿ ರಿಸಿದೆ’ ಎಂದು ಅವರು ಹೇಳಿದರು.

ADVERTISEMENT

ರಾಜ್ಯದ 16 ಹಾಲು ಒಕ್ಕೂಟಗಳು ಪ್ರತಿದಿನ 85 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿದೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ 100 ಕ್ಕೂ ಹೆಚ್ಚು ವಿವಿಧ ಹಾಲಿನ ಉತ್ಪನ್ನಗಳು ಜನಪ್ರಿಯವಾಗಿವೆ
ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.