ADVERTISEMENT

ಸ್ಥಳೀಯ ಸಂಸ್ಥೆ: ಮೀಸಲು ಪಟ್ಟಿ ಪರಿಶೀಲನೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2018, 20:05 IST
Last Updated 4 ಅಕ್ಟೋಬರ್ 2018, 20:05 IST

ಬೆಂಗಳೂರು: ‘ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸಂಬಂಧಿಸಿದಂತೆ ಕಳೆದ ತಿಂಗಳ 6ರಂದು ಹೊರಡಿಸಿರುವ ಪರಿಷ್ಕೃತ ಮೀಸಲಾತಿ ಪಟ್ಟಿ ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲಾಗಿದೆ’ ಎಂದು ಅಡ್ವೊಕೇಟ್ ಜನರಲ್ (ಎ.ಜಿ) ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ಮೀಸಲು ಪಟ್ಟಿ ಪ್ರಶ್ನಿಸಿ ಕಡೂರಿನ ವಿಜಯ ಹಾಗೂ ನಾಗಮಂಗಲದ ರೂಪಾ ಸೇರಿದಂತೆ 15ಕ್ಕೂ ಹೆಚ್ಚು ಜನರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಎ.ಜಿ ಉದಯ ಹೊಳ್ಳ ಅವರು ನ್ಯಾಯಪೀಠಕ್ಕೆ ಈ ವಿಷಯ ತಿಳಿಸಿದರು.

ADVERTISEMENT

‘ಈ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಕಾದು ನೊಡಬೇಕು. ಆದಾಗ್ಯೂ, ಸೆ.3ರಂದು ಹೊರಡಿಸಿರುವ ಮೀಸಲು ಪಟ್ಟಿಯಲ್ಲಿ ಯಾವುದೇ ತಕರಾರು ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.