ADVERTISEMENT

ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

​ಪ್ರಜಾವಾಣಿ ವಾರ್ತೆ
Published 28 ಮೇ 2019, 19:59 IST
Last Updated 28 ಮೇ 2019, 19:59 IST
   

ಬೆಂಗಳೂರು: ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ (ಮೇ 29) ಮತದಾನ ನಡೆಯಲಿದೆ.

ಕೆಲವು ಮಹಾನಗರ ಪಾಲಿಕೆಗಳ ಸದಸ್ಯರ ಸ್ಥಾನ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ 1,296 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದ್ದು, 4,360 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.ಮೇ 31ರಂದು ಮತ ಎಣಿಕೆ ನಡೆಯಲಿದೆ.

ನಗರ ಸ್ಥಳೀಯ ಸಂಸ್ಥೆಗಳ 1,326 ವಾರ್ಡ್‍ಗಳ ಪೈಕಿ 30 ವಾರ್ಡ್‌ಗಳಲ್ಲಿ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 1,296 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್‍ನಿಂದ 1,224, ಬಿಜೆಪಿಯಿಂದ 1,125, ಜೆಡಿಎಸ್‌ನ 780 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ADVERTISEMENT

ಮತದಾನ ನಡೆಯುವ ನಗರಗಳ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.