ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ: ನಾಳೆ ಸಾರ್ವತ್ರಿಕ ರಜೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2018, 20:13 IST
Last Updated 31 ಡಿಸೆಂಬರ್ 2018, 20:13 IST

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರಣಗಳಿಂದ ಖಾಲಿಯಾದ ಮೂರು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳು ಹಾಗೂ 29 ಜಿಲ್ಲೆಗಳ 240 ಗ್ರಾಮ ಪಂಚಾಯಿತಿಗಳ 330 ಸ್ಥಾನಗಳಿಗೆ ಉಪ ಚುನಾವಣೆ ಮತ್ತು ಅವಧಿ ಮೀರಿದ ನಾಲ್ಕು ತಾಲ್ಲೂಕುಗಳ ಎಂಟು ಗ್ರಾಮ ಪಂಚಾಯಿತಿಗಳಿಗೆ ಇದೇ 2ರಂದು ಚುನಾವಣೆ ನಡೆಯಲಿದ್ದು, ಅಂದು ಆ ಮತಕ್ಷೇತ್ರಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಚುನಾವಣೆ ನಡೆಯಲಿರುವ ಎಲ್ಲ ಮತ ಕ್ಷೇತ್ರಗಳಲ್ಲಿರುವ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೆ ಸರ್ಕಾರ ರಜೆ ಘೋಷಿಸಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲಾಗಿರುವ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಅರ್ಹ ಮತದಾರ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿ ಕಾರ್ಮಿಕ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.