ADVERTISEMENT

GBA ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷವೇ ಚುನಾವಣೆ: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 14:05 IST
Last Updated 1 ಜನವರಿ 2026, 14:05 IST
<div class="paragraphs"><p>ಡಿ.ಕೆ. ಶಿವಕುಮಾರ್‌</p></div>

ಡಿ.ಕೆ. ಶಿವಕುಮಾರ್‌

   

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ನಗರ ಪಾಲಿಕೆಗಳು ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷವೇ ಚುನಾವಣೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಹೆಬ್ಬಾಳ ಮೇಲ್ಸೇತುವೆಯಲ್ಲಿ ಹೊಸ ಲೂಪ್‌ಗೆ ಗುರುವಾರ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

‘2026 ಶುಭ ಲಗ್ನದಲ್ಲಿ ಆರಂಭವಾಗಿದೆ. 2025ರಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ. ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಟೆಕ್ ಸಮ್ಮೇಳನದ ಮೂಲಕ ಕರ್ನಾಟಕವನ್ನು ಮುನ್ನಡೆಸಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ’ ಎಂದರು.

‘ನೀರಾವರಿ ಇಲಾಖೆಯಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಯುಕೆಪಿ, ತುಂಗಭದ್ರಾ ಯೋಜನೆಯಲ್ಲಿ ಕೈಗೊಂಡ ತೀರ್ಮಾನ, ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ, ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಅವರ ನಂಬಿಕೆ ಉಳಿಸಿಕೊಳ್ಳಲು, ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.