ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ಮುಖ್ಯವಾಗಿ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ.
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದರಿಂದ ಎಲ್ಲೆಡೆ ಪಕ್ಷಕ್ಕೆ ಅನುಕೂಲವಾಗಿಲ್ಲ. ಚನ್ನಪಟ್ಟಣ ಲೋಕಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ನಮ್ಮ ಅಭ್ಯರ್ಥಿ ಪರವಾಗಿ ಕೆಲಸ ಮಾಡಲಿಲ್ಲ. ಪರಿಣಾಮವಾಗಿ ಪಕ್ಷದ ಅಭ್ಯರ್ಥಿ ಸೋಲಬೇಕಾಯಿತು ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕುತ್ತಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬಾರದು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಈ ಸಂಬಂಧ ಜಿಲ್ಲಾಧ್ಯಕ್ಷರುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹಲವು ಜಿಲ್ಲಾಧ್ಯಕ್ಷರು ಈ ವಿಚಾರವನ್ನು ರಾಜ್ಯ ನಾಯಕರ ಗಮನಕ್ಕೆ ತಂದಿದ್ದಾರೆ. ಇದನ್ನು ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.