ADVERTISEMENT

ಸ್ಥಳೀಯ ಸಂಸ್ಥೆ ಮೀಸಲು ಕ್ರಮ ಬೇಡ: ಹೈಕೋರ್ಟ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 21:41 IST
Last Updated 17 ಮಾರ್ಚ್ 2020, 21:41 IST
   

ಬೆಂಗಳೂರು: ‘ರಾಜ್ಯದ 58 ನಗರಸಭೆ, 117 ಪುರಸಭೆ ಹಾಗೂ 93 ಪಟ್ಟಣ ಪಂಚಾಯಿತಿ ಸೇರಿದಂತೆ 268 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ 2020ರ ಮಾರ್ಚ್11ರಂದು ಹೊರಡಿಸಿದ ಅಧಿಸೂಚನೆಗೆ ಸಂಬಂಧಿಸಿದಂತೆ ಸದ್ಯ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

‌ರಾಯಚೂರು ಜಿಲ್ಲೆಯ ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ವರ್ಗಕ್ಕೆ (ಎಸ್‌ಟಿ–ಮಹಿಳೆ) ನಿಗದಿಪಡಿಸಿರುವುದನ್ನು ಪ್ರಶ್ನಿಸಿ ಸ್ಥಳೀಯ ನಗರಸಭೆ ಸದಸ್ಯ ಆಲಂ ಬಾಷಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಏಪ್ರಿಲ್‌ 1ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT