ADVERTISEMENT

ಕ್ಯಾಬ್‌, ಆಟೊ ಚಾಲಕರಿಗೆ ₹ 5000 ಸಹಾಯಧನ: ಸೇವಾಸಿಂಧು ವೆಬ್‌ಸೈಟ್‌ನಲ್ಲಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 8 ಮೇ 2020, 7:48 IST
Last Updated 8 ಮೇ 2020, 7:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕ್ಯಾಬ್, ಟ್ಯಾಕ್ಸಿ ಹಾಗೂ ಆಟೊ ಚಾಲಕರಿಗೆ 5 ಸಾವಿರ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಚಾಲಕರು ಸೇವಾಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ, ಜಾಲತಾಣದ ಮೂಲಕ ಅರ್ಜಿ ಸಲ್ಲಿಸಲುಕ್ಯಾಬ್, ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಸೂಚಿಸಿದೆ.

ಆನ್‌ಲೈನ್‌ನಲ್ಲಿ ಸೇವಾ ಸಿಂಧು ಪೋರ್ಟ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದುಸಾರಿಗೆ ಇಲಾಖೆ ಆಯುಕ್ತರುಸುತ್ತೋಲೆ ಪ್ರಕಟಿಸಿದ್ದಾರೆ.

ADVERTISEMENT

ಅರ್ಜಿ ಸಲ್ಲಿಸುವ ಚಾಲಕರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ.

ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಬಿಟ್ಟು ಬೇರೆ ಯಾವ ರೀತಿಯಲ್ಲೂ ಅರ್ಜಿ ಸ್ವೀಕರಿಸುವುದಿಲ್ಲವೆಂದು ಇಲಾಖೆ ಸ್ಪಷ್ಟಪಡಿಸಿದೆ.

ವೆಬ್‌ ವಿಳಾಸ:https://sevasindhu.karnataka.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.