ADVERTISEMENT

ಮುಕ್ತ ಸಂಚಾರಕ್ಕೆ ಸಿಗದ ಅವಕಾಶ: ಅನ್ಯ ರಾಜ್ಯಗಳ ವಾಹನಗಳಿಗೆ ನಿರ್ಬಂಧ

ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್‌

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 19:55 IST
Last Updated 1 ಜೂನ್ 2020, 19:55 IST
ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಸೋಮವಾರ ಅಂತರರಾಜ್ಯ ಬಸ್‌ಗಳ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡಿದರು – -ಪ್ರಜಾವಾಣಿ ಚಿತ್ರ
ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಸೋಮವಾರ ಅಂತರರಾಜ್ಯ ಬಸ್‌ಗಳ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡಿದರು – -ಪ್ರಜಾವಾಣಿ ಚಿತ್ರ   

ಬೆಂಗಳೂರು: ಲಾಕ್‌ಡೌನ್‌ ತೆರವುಗೊಳಿಸುವ ಪ್ರಕ್ರಿಯೆ ಸೋಮವಾರ ದಿಂದ ಆರಂಭವಾಗಿದ್ದರೂ, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಅಂತರ ರಾಜ್ಯ ವಾಹನಗಳ ಸಂಚಾರಕ್ಕೆ ಇನ್ನೂ ಮುಕ್ತ ಅವಕಾಶ ನೀಡಿಲ್ಲ. ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿದವರಿಗೆ ಮಂಗಳೂರು, ಮೈಸೂರು ಮೂಲಕ ರಾಜ್ಯ ಪ್ರವೇಶಿಸಲು ಒಮ್ಮೆ ಮಾತ್ರ ಅವಕಾಶ ನೀಡಲಾಗುತ್ತಿದೆ.

ಕೇರಳ, ತಮಿಳುನಾಡು, ಆಂಧ್ರ ಹಾಗೂ ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಈ ಭಾಗದ ಜನರಿ ದ್ದರು. ಆದರೆ, ಯಾವ ರಾಜ್ಯವೂ ಅನುಮತಿ ನೀಡದಿರುವುದರಿಂದ ನಿರ್ಬಂಧ ಮುಂದುವರಿದಿದೆ.

ಚಾಮರಾಜನಗರ ಜಿಲ್ಲೆಯಲ್ಲಿರುವ ನಾಲ್ಕು ಗಡಿಭಾಗದಲ್ಲೂ ವಾಹನ– ಜನ ಸಂಚಾರ ತಡೆಯಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.