ADVERTISEMENT

ಜುಲೈ 14ರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್‌ಡೌನ್‌

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 15:32 IST
Last Updated 11 ಜುಲೈ 2020, 15:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 14ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ, ಅಂದರೆ ಜುಲೈ–22ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ
ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಸಿಎಂ ತಿಳಿಸಿದ್ದಾರೆ.

ADVERTISEMENT

ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕೋವಿಡ್-19ಸೋಂಕು ಹರಡುವುದನ್ನು ನಿಯಂತ್ರಿಸಲು ನಿಮ್ಮ ಸಹಯೋಗ ಅತಿ ಅಗತ್ಯ ಎಂದೂ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.