ADVERTISEMENT

Video | ಎಲ್ಲ ಚುನಾವಣೆಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಮುಂದುವರಿಕೆ: ಬಿಎಸ್‌ವೈ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಏಪ್ರಿಲ್ 2024, 15:30 IST
Last Updated 16 ಏಪ್ರಿಲ್ 2024, 15:30 IST

ಲೋಕಸಭಾ ಚುನಾವಣೆ ಮಾತ್ರವಲ್ಲದೇ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮಂಗಳವಾರ ದಾವಣಗೆರೆಯಲ್ಲಿ ಹೇಳಿದರು. ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರಿಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.