ಅಪ್ಪ-ಮಕ್ಕಳ ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಆದರೆ ಇದು ತಾತ್ಕಾಲಿಕ. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ' ಎಂದು ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಶಪಥ ಮಾಡಿದರು. ಎಳಸು ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ತಮ್ಮ ಅಪ್ಪನ ಮಾತು ಕೇಳಿ ಉಚ್ಛಾಟನೆ ಮಾಡಿದ್ದಾರೆ. ಇದು ಪಕ್ಷದ ಕಾರ್ಯಕರ್ತರಿಗೆ ಬಹಳ ನೋವುಂಟು ಮಾಡಿದೆ . ಬಿಜೆಪಿ ಕಟ್ಟಿದ ನಿಮಗೆ ಹೀಗಾಗಬಾರದಿತ್ತು ಎಂದು ಅವರು ನನಗೆ ಹೇಳುತ್ತಿದ್ದಾರೆ. ಬಿಜೆಪಿಗೆ ವಿಜಯೇಂದ್ರನ ಕೊಡುಗೆ ಶೂನ್ಯವೆಂದು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.