
ಹಾಸನ: ‘ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ನಾನು ಕೂಡ ಆಕಾಂಕ್ಷಿ. ಕಾರ್ಯಕರ್ತರು, ಮುಖಂಡರು ಹಾಗೂ ಸ್ಥಳೀಯ ಜನರೂ ಇದನ್ನೇ ಅಪೇಕ್ಷಿಸಿದ್ದಾರೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ನಾಯಕರು ಯಾವುದೇ ತೀರ್ಮಾನ ಕೈಗೊಂಡರೂ ಬದ್ಧನಾಗಿರುವೆ’ ಎಂದು ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರ ಮುಂದೆ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೈಕಮಾಂಡ್ ತೀರ್ಮಾನದಂತೆ ಕೆಲಸ ಮಾಡುವೆ’ ಎಂದರು.
ವಿಧಾನ ಪರಿಷತ್‌ನಲ್ಲಿ ಮೈತ್ರಿ ಅಭ್ಯರ್ಥಿ ಸೋಲಿನ ಕುರಿತು ಪ್ರತಿಕ್ರಿಯಿಸಿ, ‘ವಿಧಾನ ಪರಿಷತ್ ಚುನಾವಣೆ ಸಾರ್ವಜನಿಕ ಚುನಾವಣೆಯಲ್ಲ. ಮುಂದಿನ ಚುನಾವಣೆಗೆ ಅದು ದಿಕ್ಸೂಚಿಯೂ ಅಲ್ಲ’ ಎಂದರು.
‘ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯೂ ಶೇ 50ರಷ್ಟು ಮಹಿಳೆಯರಿಗೆ ಮಾತ್ರ ತಲುಪುತ್ತಿದೆ. ಯುವನಿಧಿ ಹಳ್ಳ ಹಿಡಿದಿದೆ. ಶಕ್ತಿ ಯೋಜನೆಯೂ ವಿಫಲವಾಗಿದ್ದು, ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಇಲ್ಲದೆ ಜನ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.