ADVERTISEMENT

ಮರೆಯದೇ ಬನ್ನಿ: ಮತದಾನ ಮಾಡಿ

ಖರ್ಗೆ, ಜಿಗಜಿಣಗಿ, ಹೆಗಡೆ ಕಣದಲ್ಲಿ; ಸಿದ್ದರಾಮಯ್ಯ, ಬಿಎಸ್‌ವೈಗೆ ಪ್ರತಿಷ್ಠೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 4:06 IST
Last Updated 23 ಏಪ್ರಿಲ್ 2019, 4:06 IST
ದಾವಣಗೆರೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್‌ ಕೇಂದ್ರಗಳಿಗೆ ಸೋಮವಾರ ತೆರಳುವ ಮುಂಚೆ ಬಸ್‌ಗಳು ನಗರದ ಹೈಸ್ಕೂಲ್‌ ಮೈದಾನದಲ್ಲಿ ಪಾರ್ಕ್‌ ಮಾಡಿದ್ದವು. –ಪ್ರಜಾವಾಣಿ ಚಿತ್ರ: ಅನೂಪ್‌ ಆರ್‌. ತಿಪ್ಪೇಸ್ವಾಮಿ
ದಾವಣಗೆರೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್‌ ಕೇಂದ್ರಗಳಿಗೆ ಸೋಮವಾರ ತೆರಳುವ ಮುಂಚೆ ಬಸ್‌ಗಳು ನಗರದ ಹೈಸ್ಕೂಲ್‌ ಮೈದಾನದಲ್ಲಿ ಪಾರ್ಕ್‌ ಮಾಡಿದ್ದವು. –ಪ್ರಜಾವಾಣಿ ಚಿತ್ರ: ಅನೂಪ್‌ ಆರ್‌. ತಿಪ್ಪೇಸ್ವಾಮಿ    

ಬೆಂಗಳೂರು: ರಾಜ್ಯದ ಉತ್ತರ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮಂಗಳವಾರ (ಏ. 23) ಮತದಾನ ನಡೆಯಲಿದ್ದು, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ರಮೇಶ ಜಿಗಜಿಣಗಿ, ಅನಂತಕುಮಾರ ಹೆಗಡೆ ಸೇರಿದಂತೆ ಹಲವು ರಾಜಕೀಯ ಧುರೀಣರ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ.

ಪುತ್ರನನ್ನು (ಬಿ.ವೈ. ರಾಘವೇಂದ್ರ) ಮತ್ತೊಮ್ಮೆ ಗೆಲ್ಲಿಸಲೇಬೇಕಾದ ಒತ್ತಡದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹಾಗೂ ಅಲ್ಲಿಯೇ ತಮ್ಮ ಆಪ್ತ ಮಧುಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ಚುನಾವಣೆ ನಿರ್ಣಾಯಕವಾಗಿದೆ. ಈ ಕ್ಷೇತ್ರದ ಫಲಿತಾಂಶ ರಾಜ್ಯ ಸರ್ಕಾರ ಹಣೆಬರಹವನ್ನು ನಿರ್ಧರಿಸಲಿದೆ ಎಂದೂ ಹೇಳಲಾಗುತ್ತಿದ್ದು, ಈ ಕಾರಣಕ್ಕೆ ಎರಡನೇ ಹಂತದ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಬಾಗಲಕೋಟೆ ಲೋಕಸಭೆ ಕ್ಷೇತ್ರ ಗೆಲ್ಲಿಸಿಕೊಳ್ಳುವುದು ಸವಾಲಾಗಿದೆ. ಹಾಗೆಯೇ ಲೋಕಸಭೆಯ ಕಾಂಗ್ರೆಸ್‌ ಸಂಸದೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೇ ಪ್ರಚಾರದ ಮುಂಚೂಣಿಯಲ್ಲಿ ನಿಂತಿದ್ದರು. ಖರ್ಗೆಯವರ ಹಳೆಯ ಶಿಷ್ಯರ ಬಲ ಕ್ರೋಡೀಕರಿಸಿದ ಯಡಿಯೂರಪ್ಪ ಅವರು, ಕಾಂಗ್ರೆಸ್‌ ನಾಯಕನನ್ನು ಮಣಿಸಲು ತಂತ್ರ ಹೆಣೆದಿದ್ದಾರೆ.

ADVERTISEMENT

ಬಿಜೆಪಿ ಎಲ್ಲ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಮೈತ್ರಿಕೂಟದ ಪರ ಜೆಡಿಎಸ್ ಮೂರು ಹಾಗೂ ಕಾಂಗ್ರೆಸ್ 11 ಕಡೆ ಸ್ಪರ್ಧಿಸಿದೆ. ಶಿವಮೊಗ್ಗ, ದಾವಣಗೆರೆ ಹಾಗೂ ಉತ್ತರ ಕನ್ನಡ ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳು ಉತ್ತರ ಕರ್ನಾಟಕ ಭಾಗದಲ್ಲಿದೆ. 2014 ಚುನಾವಣೆಯಲ್ಲಿ 14 ಕ್ಷೇತ್ರಗಳ ಪೈಕಿ 11ರಲ್ಲಿ ಬಿಜೆಪಿ ಜಯಭೇರಿ ಗಳಿಸಿತ್ತು. ಆದರೆ, ಈ ಬಾರಿ ಕಾಂಗ್ರೆಸ್‌–ಜೆಡಿಎಸ್‌ ದೋಸ್ತಿಯಿಂದ ತೀವ್ರ ಪೈಪೋಟಿ ಎದುರಾಗಿದೆ.

‌ಇದೇ 18ರಂದು ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ ಶೇ 68ರಷ್ಟು ಮತದಾನವಾಗಿತ್ತು. ಎರಡನೇ ಹಂತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಬಹುದೆಂದು ನಿರೀಕ್ಷಿಸಲಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೂ ಮತದಾನ ನಡೆಯಲಿದೆ.

ಈ ಕ್ಷೇತ್ರದ ಫಲಿತಾಂಶ ರಾಜ್ಯಸರ್ಕಾರದ ಹಣೆಬರಹವನ್ನು ನಿರ್ಧರಿಸಲಿದೆ ಎಂದೂ ಹೇಳಲಾಗುತ್ತಿದೆ. ಈ ಕಾರಣಕ್ಕೆ ಎರಡನೇ ಹಂತದ ಚುನಾವಣೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಬಾಗಲಕೋಟೆ ಲೋಕಸಭೆ ಕ್ಷೇತ್ರ ಗೆಲ್ಲಿಸಿಕೊಳ್ಳುವುದು ಸವಾಲಾಗಿದೆ. ಹಾಗೆಯೇ ಗುಲಬರ್ಗಾದಲ್ಲಿ ಲೋಕಸಭೆಯ ಕಾಂಗ್ರೆಸ್‌ ಸಂಸದೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೇ ಪ್ರಚಾರದ ಮುಂಚೂಣಿಯಲ್ಲಿ ನಿಂತಿದ್ದರು. ಖರ್ಗೆಯವರ ಹಳೆಯ ಶಿಷ್ಯರ ಬಲ ಕ್ರೋಡೀಕರಿಸಿದ ಯಡಿಯೂರಪ್ಪ ಅವರು, ಕಾಂಗ್ರೆಸ್‌ ನಾಯಕನನ್ನು ಮಣಿಸಲು ತಂತ್ರ ಹೆಣೆದಿದ್ದಾರೆ.

ಬಿಜೆಪಿ ಎಲ್ಲ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಮೈತ್ರಿಕೂಟದ ಪರ ಜೆಡಿಎಸ್ ಮೂರು ಹಾಗೂ ಕಾಂಗ್ರೆಸ್ 11 ಕಡೆ ಸ್ಪರ್ಧಿಸಿದೆ. ಶಿವಮೊಗ್ಗ, ದಾವಣಗೆರೆ ಹಾಗೂ ಉತ್ತರ ಕನ್ನಡ ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳು ಉತ್ತರ ಕರ್ನಾಟಕ ಭಾಗದಲ್ಲಿವೆ. 2014 ಚುನಾವಣೆಯಲ್ಲಿ 14 ಕ್ಷೇತ್ರಗಳ ಪೈಕಿ 11ರಲ್ಲಿ ಬಿಜೆಪಿ ಜಯಭೇರಿ ಗಳಿಸಿತ್ತು. ಆದರೆ, ಈ ಬಾರಿ ಕಾಂಗ್ರೆಸ್‌–ಜೆಡಿಎಸ್‌ ದೋಸ್ತಿಯಿಂದ ತೀವ್ರ ಪೈಪೋಟಿ ಎದುರಾಗಿದೆ.

‌ಇದೇ 18ರಂದು ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ ಶೇ 68ರಷ್ಟು ಮತದಾನವಾಗಿತ್ತು. ಎರಡನೇ ಹಂತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಬಹುದೆಂದು ನಿರೀಕ್ಷಿಸಲಾಗಿದೆ. ಬೆಳಿಗ್ಗೆ 7 ಗಂಟೆಯಿಂದಸಂಜೆ 6ರವರೆಗೂ ಮತದಾನ ನಡೆಯಲಿದೆ.

ಬಿಗಿ ಭದ್ರತೆ: ‘ಶಾಂತಿಯುತ ಮತದಾನಕ್ಕಾಗಿ 50 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್‌ ಪಂತ್ ತಿಳಿಸಿದರು.

ಚುನಾವಣೆಯಲ್ಲಿ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಅವರು, ‘35,548 ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ರಾಜ್ಯ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ದಳ, ಅರಣ್ಯ ರಕ್ಷಕರನ್ನು ಅಗತ್ಯಕ್ಕೆ ತಕ್ಕಂತೆ ಭದ್ರತೆಗೆ ನಿಯೋಜಿಸಲಾಗುವುದು’ ಎಂದರು.

ಅಂಕಿ ಅಂಶ
14 - ಲೋಕಸಭಾ ಕ್ಷೇತ್ರ
2.43 ಕೋಟಿ - ಮತದಾರರ ಸಂಖ್ಯೆ
237- ಕಣದಲ್ಲಿರುವ ಒಟ್ಟು ಅಭ್ಯರ್ಥಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.