ADVERTISEMENT

ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ತಪ್ಪುವ ಸೂಚನೆ ಕೊಟ್ಟ ಡಿ.ವಿ ಸದಾನಂದಗೌಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2024, 11:57 IST
Last Updated 13 ಮಾರ್ಚ್ 2024, 11:57 IST
ಡಿ.ವಿ. ಸದಾನಂದ ಗೌಡ 
ಡಿ.ವಿ. ಸದಾನಂದ ಗೌಡ    

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ, ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಿ ಫೇಸ್‌ಬುಕ್‌ ಪೋಸ್ಟ್ ಮಾಡಿದ್ದಾರೆ.

ಅ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಾಗಿವ ಸುಳಿವು ನೀಡಿದ್ದಾರೆ. ಕಳೆದ 10 ವರ್ಷಗಳಿಂದ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ.

ಅವರ ಫೇಸ್‌ಬುಕ್ ಪೋಸ್ಟ್ ಹೀಗಿದೆ;

ADVERTISEMENT

’ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ.

ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು’.

ಸದಾನಂದ ಗೌಡ ಅವರಿಗೆ ಟಿಕೆಟ್ ಕೈತಪ್ಪುವ ಸಂಭವ ಇದೆ ಎನ್ನುವ ಚರ್ಚೆಗಳು ನಡೆಯುತ್ತಿರುವಾಗಲೇ ಅವರು ಈ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.