ADVERTISEMENT

ಲೋಕಸಭೆ ಚುನಾವಣೆ: ‘ಕೈ’ಗೆ ಸಚಿವರು ಸಂಯೋಜಕರು

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 20:34 IST
Last Updated 7 ಜನವರಿ 2024, 20:34 IST
ಕೆ.ಸಿ. ವೇಣುಗೋಪಾಲ್‌
ಕೆ.ಸಿ. ವೇಣುಗೋಪಾಲ್‌   

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸಚಿವರನ್ನು ರಾಜ್ಯದ ಎಲ್ಲ 28 ಕ್ಷೇತ್ರಗಳಿಗೆ ಪಕ್ಷದ ಸಂಯೋಜಕರನ್ನಾಗಿ ಎಐಸಿಸಿ ನೇಮಿಸಿದೆ.

ಸಂಯೋಜಕರ ನೇಮಕಾತಿ ಪ್ರಸ್ತಾವಕ್ಕೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಯಾ ಜಿಲ್ಲೆಯನ್ನು ಒಳಗೊಂಡ ಕ್ಷೇತ್ರದ ಹೊಣೆಯನ್ನು ನೀಡಲಾಗಿದೆ.

ಸಂಯೋಜಕರು: ಚಿಕ್ಕೋಡಿ– ಎಚ್‌.ಕೆ. ಪಾಟೀಲ, ಬೆಳಗಾವಿ– ಸತೀಶ ಜಾರಕಿಹೊಳಿ, ಬಾಗಲಕೋಟೆ– ಆರ್‌.ಬಿ. ತಿಮ್ಮಾಪುರ, ವಿಜಯಪುರ– ಎಂ.ಬಿ. ಪಾಟೀಲ, ಕಲಬುರಗಿ– ಪ್ರಿಯಾಂಕ್‌ ಖರ್ಗೆ, ರಾಯಚೂರು– ಎನ್.ಎಸ್‌. ಬೋಸರಾಜು, ಬೀದರ್‌– ಈಶ್ವರ ಖಂಡ್ರೆ, ಕೊಪ್ಪಳ–  ಶಿವರಾಜ ತಂಗಡಗಿ, ಬಳ್ಳಾರಿ– ಬಿ. ನಾಗೇಂದ್ರ, ಹಾವೇರಿ– ಶಿವಾನಂದ ಪಾಟೀಲ, ಧಾರವಾಡ– ಸಂತೋಷ್‌ ಲಾಡ್‌, ಉತ್ತರಕನ್ನಡ– ಮಂಕಾಳ ವೈದ್ಯ, ದಾವಣಗೆರೆ– ಎಸ್‌.ಎಸ್‌. ಮಲ್ಲಿಕಾರ್ಜುನ, ಶಿವಮೊಗ್ಗ– ಮಧುಬಂಗಾರಪ್ಪ, ಉಡುಪಿ– ಚಿಕ್ಕಮಗಳೂರು– ಕೆ.ಜೆ. ಜಾರ್ಜ್, ಹಾಸನ– ಕೆ.ಎನ್‌. ರಾಜಣ್ಣ, ದಕ್ಷಿಣಕನ್ನಡ– ದಿನೇಶ್‌ ಗುಂಡೂರಾವ್‌, ಚಿತ್ರದುರ್ಗ– ಡಿ. ಸುಧಾಕರ್‌, ಚಿಕ್ಕಬಳ್ಳಾಪುರ– ಕೆ.ಎಚ್‌. ಮುನಿಯಪ್ಪ, ತುಮಕೂರು–ಜಿ. ಪರಮೇಶ್ವರ, ಮಂಡ್ಯ– ಎನ್‌. ಚಲುವರಾಯಸ್ವಾಮಿ, ಮೈಸೂರು– ಕೆ. ವೆಂಕಟೇಶ್‌, ಚಾಮರಾಜನಗರ– ಎಚ್‌.ಸಿ. ಮಹದೇವಪ್ಪ, ಬೆಂಗಳೂರು ಗ್ರಾಮಾಂತರ– ಬೈರತಿ ಸುರೇಶ್‌, ಬೆಂಗಳೂರು ಉತ್ತರ– ಕೃಷ್ಣ ಬೈರೇಗೌಡ, ಬೆಂಗಳೂರು ಕೇಂದ್ರ– ಜಮೀರ್‌ ಅಹಮದ್‌ ಖಾನ್‌, ಬೆಂಗಳೂರು ದಕ್ಷಿಣ– ರಾಮಲಿಂಗಾರೆಡ್ಡಿ, ಕೋಲಾರ– ಡಾ.ಎಂ.ಸಿ. ಸುಧಾಕರ್‌.  

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.