ADVERTISEMENT

ನಿಂಗಪ್ಪ ಪ್ರಕರಣ: ಸರ್ಕಾರಕ್ಕೆ ಶೀಘ್ರ ವರದಿ; ಲೋಕಾಯುಕ್ತ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:59 IST
Last Updated 2 ಜುಲೈ 2025, 15:59 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

ಬೆಂಗಳೂರು: ಲೋಕಾಯುಕ್ತದ ಅಧಿಕಾರಿಗಳ ಹೆಸರಿನಲ್ಲಿ ಮಾಜಿ ಕಾನ್‌ಸ್ಟೆಬಲ್‌ ನಿಂಗಪ್ಪ ಸಾವಂತ ಅವರು ಸರ್ಕಾರದ ಇತರ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದ ಪ್ರಕರಣದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ಲೋಕಾಯುಕ್ತ ಸಂಸ್ಥೆಯು ಸಿದ್ಧತೆ ನಡೆಸಿದೆ.

‘ಆರೋಪಿಯ ವಿವರಗಳು, ಕೃತ್ಯದ ಸ್ವರೂಪ, ಅದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು, ಕೃತ್ಯದಲ್ಲಿ ಲೋಕಾಯುಕ್ತದ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರ ಬಗ್ಗೆ ಮತ್ತು ಅವರ ಪಾತ್ರ ಕುರಿತ ವಿವರಗಳು ವರದಿಯಲ್ಲಿ ಇದೆ’ ಎಂದು ಲೋಕಾಯುಕ್ತದ ಉನ್ನತ ಮೂಲಗಳು ತಿಳಿಸಿವೆ.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಯ ಮಧ್ಯೆ ಈಗಾಗಲೇ ಪತ್ರ ವ್ಯವಹಾರ ನಡೆದಿದೆ. ಈ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.